ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮೈಸೂರು:
ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಹಿಂಬದಿ ಸವಾರ ಸಾವಿಗೀಡಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಗಣಿಗರ ಹುಂಡಿಯ ನಿವಾಸಿ ಶಿವಕುಮಾರ್ (27) ಮೃತಪಟ್ಟವರು. ಇವರು ತಮ್ಮ ಸಂಬoಧಿ ಅಭಿಷೇಕ್ ಎಂಬುವರ ಜೊತೆ ಬೈಕ್ನಲ್ಲಿ ಹೋಗುತ್ತಿದ್ದಾಗ, ನಿಯಂತ್ರಣ ತಪ್ಪಿದ ಬೈಕ್ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ಕೆಳಕ್ಕೆ ಬಿದ್ದ ಶಿವಕುಮಾರ್ಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡ ಅಭಿಷೇಕ್ ಪರಾರಿಯಾಗಿದ್ದಾರೆ. ಈ ಬಗ್ಗೆ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.