Thursday, August 11, 2022

Latest Posts

ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸಾವು

ಮದ್ದೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಸಮೀಪದ ಚಂದೂಪುರ ಗೇಟ್ ಬಳಿ ಜರುಗಿದೆ.
ಸಮೀಪದ ಅಜ್ಜಹಳ್ಳಿ ಗ್ರಾಮದ ಚಿಕ್ಕಣ್ಣಾಚಾರಿ ಮಗ ಕಾಂತರಾಜು (35) ಎಂಬಾತನೇ ಮೃತಪಟ್ಟ ಬೈಕ್ ಸವಾರ.
ಕೆ.ಎಂ.ದೊಡ್ಡಿ ಕಡೆಯಿಂದ ಅಜ್ಜಹಳ್ಳಿ ಗ್ರಾಮಕ್ಕೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಪಿಎಸ್‍ಐ ಶೇಷಾದ್ರಿ ಮತ್ತು ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ವಶಕ್ಕೆ ಪಡೆದ ಪೆÇಲೀಸರು ಸಮುದಾಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿ ವಾರಸುದಾರರಿಗೆ ವಶಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ. ದೊಡ್ಡಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss