ಬೈರುತ್: ಕಳೆದ ವಾರ ಲೆಬನಾನ್ ರಾಜಧಾನಿ ಬೈರುತ್ನಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದ ಸಾವನ್ನಪ್ಪಿದವರ ಸಂಖ್ಯೆ 178ಕ್ಕೆ ಏರಿದೆ. ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ, ಸ್ಫೋಟದಲ್ಲಿ 6,000 ಜನರು ಗಾಯಗೊಂಡಿದ್ದಾರೆ ಮತ್ತು ಕನಿಷ್ಠ 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿ ಮಾಡಿದೆ.
ಸ್ಫೋಟವು ಆರು ಆಸ್ಪತ್ರೆಗಳಲ್ಲಿನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದ್ದು, ಬೈರುತ್ನ ಕೆಲವು ಭಾಗಗಳಲ್ಲಿ 20ಕ್ಕೂ ಹೆಚ್ಚು ಚಿಕಿತ್ಸಾಲಯಗಳನ್ನು ಹಾನಿಗೊಳಿಸಿದೆ ಎಂದು ಹೇಳಿದೆ.
120 ಶಾಲೆಗಳು ಹಾನಿಗೊಳಗಾಗಿದ್ದು, ಅದರಲ್ಲಿ ಸುಮಾರು 50 ಸಾವಿರ ವಿದ್ಯಾರ್ಥಿಗಳು ಅಧ್ಯಯ ಮಾಡಿದ್ದು, 1,000ಕ್ಕೂ ಹೆಚ್ಚು ನಿವಾಸಗಳು ಸಂಪೂರ್ಣ ಹಾನಿಗೊಳಗಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಆ.4 ರಂದು ಬೈರುತ್ ನಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ಸ್ಫೋಟವು 2,750 ಟನ್ ಅಮೋನಿಯಂ ನೈಟ್ರೇಟ್ ನಿಂದ ಸಂಭವಿಸಿದೆ.