ಹೊಸದಿಗಂತ ವರದಿ,ಮಂಗಳೂರು:
ಇಲ್ಲಿನ ಉಳ್ಳಾಲ ಅಳಿವೆಬಾಗಿಲಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಸರ್ಕಾರ ರೂ.6 ಲಕ್ಷ ಪರಿಹಾರ ಬಿಡುಗಡೆಗೊಳಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವರು, ಮಂಗಳೂರಿನ ಪಡುಕಡಲಿನಲ್ಲಿ ಮೀನುಗಾರಿಕೆ ದೋಣಿ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿರ್ದೇಶನದ ಮೇರೆಗೆ ತಲಾ 6 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಲಿದೆ. ನೊಂದ ಕುಟುಂಬಗಳ ಪರವಾಗಿ ಮತ್ತಷ್ಟು ನೆರವಿಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.