Sunday, June 26, 2022

Latest Posts

ಬ್ಯಾಟರಿ ಚಾಲಿತ ವಾಹನ ಸವಾರರಿಗೆ ಗುಡ್ ನ್ಯೂಸ್: ರಸ್ತೆ ತೆರಿಗೆಯಲ್ಲಿ ಸಂಪೂರ್ಣ ವಿನಾಯಿತಿ 

ಹೊಸದಿಲ್ಲಿ: ರಾಷ್ಟ್ರದ ರಾಜಧಾನಿಯಲ್ಲಿ ನಿತ್ಯವೂ ವಾಯುಮಾಲಿನ್ಯದ ಸಮಸ್ಯೆ . ಆದರೆ ಕೋವಿಡ್ ನಿಂದ ಉಂಟಾದಂತ ಲಾಕ್ ಡೌನ್ ನಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಶೇ.40ರಷ್ಟು ಕಡಿಮೆಗೊಂಡಿತ್ತು. ಈ ಹಿನ್ನೆಲೆ ಸ್ವಚ್ಛಂದ ದೆಹಲಿ ಪರಿಸರ ಮುಂದುವರಿಕೆಗಾಗಿ ಮಹತ್ವದ ಹೆಜ್ಜೆ ಇಟ್ಟಿರುವ ಆಪ್ ಸರ್ಕಾರ, ಅದಕ್ಕಾಗಿ ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ಸಾರಿಗೆಯಿಂದ ಸಂಪೂರ್ಣ ವಿನಾಯಿತಿ ಘೋಷಿಸಿದೆ.
ಈ ಕುರಿತಂತೆ ದೆಹಲಿ ಸಾರಿಗೆ ಸಚಿವ ಕೈಲಾಸ್ ಗೆಹಲೋಟ್ ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, ದೆಹಲಿಯಲ್ಲಿ ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ಸಾರಿಗೆಯಿಂದ ಸಂಪೂರ್ಣ ವಿನಾಯಿತಿ ಘೋಷಿಸಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಬ್ಯಾಟರಿ ಚಾಲಿತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss