ಹೊಸ ದಿಗಂತ ಆನ್ ಲೈನ್ ಡೆಸ್ಕ್:
ವಿಶ್ವದ ಮಾಜಿ ನಂಬರ್ ಒನ್ ಬ್ಯಾಡ್ಮಿಂಟನ್ ಆಟಗಾರ್ತಿ, ಒಲಂಪಿಕ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಅವರಿಗೆ ಕೊರೋನಾ ಸೋಂಕು ದೃಢ ಪಟ್ಟಿದೆ.
ಇಂದು ಥಾಯ್ಲೆಂಡ್ ನಲ್ಲಿ ನಡೆಯಲಿರುವ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಗೂ ಮುನ್ನಾ ನೆಹ್ವಾಲ್ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ. ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.