Thursday, November 26, 2020

Latest Posts

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ: ಜಿಲ್ಲೆಯಲ್ಲಿಯೇ ಕಂಡುಬಂತು ನೀರಸ ಪ್ರತಿಕ್ರಿಯೆ

ಹೊಸದಿಗಂತ ವರದಿ, ಬಳ್ಳಾರಿ ಜಿಲ್ಲೆ ವಿಭಜನೆ ಕ್ರಮ ಖಂಡಿಸಿ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮೀತಿ, ರೈತ ಸಂಘ, ವಿವಿಧ ಸಂಘಟನೆ ಪದಾಧಿಕಾರಿಗಳು ಕರೆ‌ ನೀಡಿದ ಬಳ್ಳಾರಿ ಬಂದ್ ಗೆ ಗುರುವಾರ ನೀರಸ...

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನ ಯೋಜನೆಗಾಗಿ 2 ಸಾವಿರ ಎಕರೆ ಕಬ್ಬು ಬೆಳೆಸುವ ಯೋಚನೆ!

ಹೊಸ ದಿಗಂತ ವರದಿ, ಉಡುಪಿ:

ಜಿಲ್ಲೆಯ ಬ್ರಹ್ಮಾವರದಲ್ಲಿರುವ ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಯೋಜನೆಗೆ ಪೂರಕವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಸಾಲಿನಲ್ಲಿ ಸುಮಾರು 2 ಸಾವಿರ ಎಕರೆ ಕಬ್ಬನ್ನು ಬೆಳೆಸುವ ಯೋಜನೆ ಕಾರ್ಖಾನೆಗೆ ಇದೆ ಎಂದು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಭಾನುವಾರ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಕಚೇರಿಯಲ್ಲಿ ನಡೆದ ನೂತನ ಆಡಳಿತ ಮಂಡಳಿಯ ಚೊಚ್ಚಲ ಸಭೆಯಲ್ಲಿ ಈ ಕುರಿತು ನಿರ್ಣಯಿಸಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ರೈತರ ಮತ್ತು ಹಿತಚಿಂತಕರ ಸಭೆಯನ್ನು ಸಂಘಟಿಸಿ ವ್ಯಾಪಕವಾಗಿ ಕಬ್ಬು ಬೆಳೆಸಲು ಮನವೊಲಿಸುವ ಮೂಲಕ ರೈತರ ಜೀವನಾಡಿಯಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದವರು ಹೇಳಿದ್ದಾರೆ.
ಸಕ್ಕರೆ ಕಾರ್ಖಾನೆಯ ಸಿಬ್ಬಂದಿಯ ವೇತನ, ರೈತರ ಬಾಕಿ ಪಾವತಿಗಾಗಿ ರಾಜ್ಯ ಸರಕಾರದಿಂದ ಸಾಲ ಪಡೆಯಲಾಗಿದ್ದು, ಈ ಸಾಲಗಳನ್ನು ಅತಿ ಶೀಘ್ರದಲ್ಲಿ ಮುಕ್ತಗೊಳಿಸಲಾಗುವುದು. ಸಕ್ಕರೆ ಕಾರ್ಖಾನೆಗೆ ಶಾಶ್ವತ ಆದಾಯ ತರುವ ಮೂಲಕ್ಕೆ ಯೋಜನೆ ರೂಪಿಸಲಾಗುವುದು. ರೈತರೊಂದಿಗೆ ನಿರಂತರ ಸಂಪರ್ಕ, ಸಾರ್ವಜನಿಕ ಸಮಾಲೋಚನಾ ಸಭೆ, ಸದಸ್ಯತ್ವ ಅಭಿಯಾನ, ಪಾಲು ಬಂಡವಾಳ ಸಂಗ್ರಹ ಹಾಗೂ ಜನಾಂದೋಲನದ ಮೂಲಕ ಶೀಘ್ರ ಕಾರ್ಖಾನೆ ಪುನಶ್ಚೇತನದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದೂ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಆಡಳಿತ ನಿರ್ದೇಶಕ ಪ್ರವೀಣ್ ನಾಯಕ್, ಉಪಾಧ್ಯಕ್ಷ ಶಾನಾಡಿ ಉಮಾನಾಥ್ ಶೆಟ್ಟಿ , ನಿರ್ದೇಶಕರಾದ ಆಸ್ತಿಕ ಶಾಸ್ತ್ರಿ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಸನ್ಮತ್ ಕುಮಾರ್ ಹೆಗ್ಡೆ ಜನ್ನಾಡಿ, ರತ್ನಾಕರ ಗಾಣಿಗ ಬಳ್ಕೂರು, ಗೀತಾ ಶಂಭು ಪೂಜಾರಿ, ಹೇಮಲತಾ ಯು. ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ: ಜಿಲ್ಲೆಯಲ್ಲಿಯೇ ಕಂಡುಬಂತು ನೀರಸ ಪ್ರತಿಕ್ರಿಯೆ

ಹೊಸದಿಗಂತ ವರದಿ, ಬಳ್ಳಾರಿ ಜಿಲ್ಲೆ ವಿಭಜನೆ ಕ್ರಮ ಖಂಡಿಸಿ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮೀತಿ, ರೈತ ಸಂಘ, ವಿವಿಧ ಸಂಘಟನೆ ಪದಾಧಿಕಾರಿಗಳು ಕರೆ‌ ನೀಡಿದ ಬಳ್ಳಾರಿ ಬಂದ್ ಗೆ ಗುರುವಾರ ನೀರಸ...

ಮೃಗಾಲಯ ಪ್ರಾಧಿಕಾರದ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರುಗಳಿಂದ ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಎಲ್.ಆರ್.ಮಹದೇವಸ್ವಾಮಿ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಹೇಮಂತ್‌ಕುಮಾರ್‌ಗೌಡ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಮಿಸಿದ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಕಛೇರಿಯಲ್ಲಿ ಪ್ರಾಣಿಯೊಂದನ್ನು...

Don't Miss

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ: ಜಿಲ್ಲೆಯಲ್ಲಿಯೇ ಕಂಡುಬಂತು ನೀರಸ ಪ್ರತಿಕ್ರಿಯೆ

ಹೊಸದಿಗಂತ ವರದಿ, ಬಳ್ಳಾರಿ ಜಿಲ್ಲೆ ವಿಭಜನೆ ಕ್ರಮ ಖಂಡಿಸಿ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮೀತಿ, ರೈತ ಸಂಘ, ವಿವಿಧ ಸಂಘಟನೆ ಪದಾಧಿಕಾರಿಗಳು ಕರೆ‌ ನೀಡಿದ ಬಳ್ಳಾರಿ ಬಂದ್ ಗೆ ಗುರುವಾರ ನೀರಸ...
error: Content is protected !!