ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ರೂಪಾಂತರದಿಂದ ತಲ್ಲಣ ಹೊಂದಿದ ಬ್ರಿಟನ್ನಲ್ಲಿ ಈವರೆಗೆ ಆರು ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ ಲಸಿಕೆ ಪಡೆದಿದ್ದಾರೆ ಎಂದು ಬ್ರಿಟಿಷ್ ಸರ್ಕಾರ ತಿಳಿಸಿದೆ.
ಫೈಜರ್-ಬಯೊಎನ್ಟೆಕ್ ತಯಾರಿಸಿದ ಲಸಿಕೆಯನ್ನು 6 ಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ನೀಡಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ.
ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರು ಕೂಡಾ ಕೊರೋನಾ ಲಸಿಕೆಯ ಮೊದಲ ಡೋಸ್ ಅನ್ನು ಡಿ.22 ರಂದು ಪಡೆದಿದ್ದರು.
ಲಸಿಕೆಯ ಸುರಕ್ಷತೆಯ ಬಗ್ಗೆ ಅಮೆರಿಕದ ಸಾರ್ವಜನಿಕರಿಗೆ ಧೈರ್ಯ ತುಂಬುವ ಪ್ರಯತ್ನವನ್ನು ಅವರು ಮಾಡಿದ್ದಾರೆ.