ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್ ರಾಣಿ ಎಲಿಜಬೆತ್ II ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
2015 ಹಾಗೂ 2018ರಲ್ಲಿ ಇಂಗ್ಲೆಂಡ್‌ಗೆ ಭೇಟಿ ನೀಡಿದ್ದ ವೇಳೆ 2ನೇ ಕ್ವೀನ್ ಎಲಿಜಬೆತ್‌ರೊಂದಿಗೆ ಸಾಕಷ್ಟು ಸ್ಮರಣೀಯ ಸಭೆಯಗಳಲ್ಲಿ ನಾನು ಭಾಗವಹಿಸಿದ್ದೆ. ಅವರ ಮಮಕಾರ ಮತ್ತು ದಯೆಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಸಭೆಯೊಂದರಲ್ಲಿ ಅವರು ಮಹಾತ್ಮ ಗಾಂಧಿಯವರು ತಮ್ಮ ಮದುವೆಗೆ ಉಡುಗೊರೆಯಾಗಿ ನೀಡಿದ ಕರವಸ್ತ್ರವನ್ನು ನನಗೆ ತೋರಿಸಿದರು. ನಾನು ಯಾವಾಗಲೂ ಅವರನ್ನು ಗೌರವಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ