ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭತ್ತ ಖರೀದಿ ಕೇಂದ್ರ ಸ್ಥಾಪಿಸುವಂತೆ ಬಿಜೆಪಿ ರೈತ ಮೋರ್ಚಾ ಒತ್ತಾಯ

ಬಳ್ಳಾರಿ: ಭತ್ತ ಖರೀದಿ ಕೇಂದ್ರ ಸ್ಥಾಪನೆ ಮಾಡಬೇಕು, ಸಿಸಿಐ ಖರೀದಿ ಕೇಂದ್ರ ಸ್ಥಾಪಿಸಬೇಕು ಹಾಗೂ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಜಿಲ್ಲಾಧಿಕಾರಿಗವರ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ರವಾನಿಸಿದರು. ಈ ಸಂದರ್ಭದಲ್ಲಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಗುರುಲಿಂಗನಗೌಡ ಅವರು ಮಾತನಾಡಿ, ರಾಜ್ಯಾದ್ಯಂತ ಉತ್ತಮ ಮಳೆಯಾದ ಹಿನ್ನೆಲೆ ರೈತರಲ್ಲಿ ಸಂತಸ ಮನೆ ಮಾಡಿದೆ. ಈಗಾಗಲೇ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಬಹುತೇಕ ರೈತರು ಕಟಾವಿಗೆ ಸಿದ್ದತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು, ಜಿಲ್ಲಾ ಕೇಂದ್ರದಲ್ಲಿ‌ ಅಷ್ಟೇ ಅಲ್ಲ, ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಐನಾಥ್ ರೆಡ್ಡಿ ಅವರು ಮಾತನಾಡಿ, ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಭತ್ತದ ಫಸಲು ಉತ್ತಮವಾಗಿ ಬಂದಿದ್ದು, ರೈತರ‌ ಮೊಗದಲ್ಲಿ ಸಂಭ್ರಮ ಮನೆ ಮಾಡಿದೆ. ಈಗಾಗಲೆ ಬೆಳೆ ಕಟಾವಿಗೆ ಬಂದಿದ್ದು,‌ ಬಹುತೇಕ ಎಲ್ಲ ರೈತರು ಕಟಾವಿಗೆ ಸಿದ್ದತೆ‌ ನಡೆಸಿದ್ದಾರೆ. ಕೂಡಲೆ ಭತ್ತ ಖರೀದಿ ಕೇಂದ್ರವನ್ನು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸ್ಥಾಪಿಸಬೇಕು, ಕೇಂದ್ರ ಸರ್ಕಾರದ ಸ್ವಾಮ್ಯದ ಸಿಸಿಐ ಸಂಸ್ಥೆ ಮೊದಲಿನಿಂದಲೂ ಎ ಗ್ರೇಡ್ ಹತ್ತಿಯನ್ನು ಮಾತ್ರ ಖರೀದಿಸುತ್ತಿದ್ದು, ಇದು ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಬಿ ಹಾಗೂ ಸಿ ಗ್ರೇಡ್ ಹತ್ತಿಯನ್ನು ಖರೀದಿಸಲು ಮುಂದಾಗುತ್ತಿಲ್ಲ. ಕೂಡಲೇ ಬಿ.ಹಾಗು ಸಿ ಗ್ರೇಡ್ ಹತ್ತಿಯನ್ನು ಖರೀದಿಸುವಂತೆ ಸಿಸಿಐ ಸಂಸ್ಥೆಗೆ ಮುಖ್ಯಮಂತ್ರಿಗಳು ನಿರ್ಧೇಶಿಸಬೇಕು ಎಂದು ಒತ್ತಾಯಿಸಿದರು.
ಸಿಸಿಐ ಖರೀದಿ ಕೇಂದ್ರವನ್ನು ಹಗರಿಬೊಮ್ಮನಹಳ್ಳಿ ಯಲ್ಲೂ ಸ್ಥಾಪಿಸಬೇಕು, ಇದರಿಂದ ಹರಪನಹಳ್ಳಿ, ಕೂಡ್ಲಗಿ, ಹಡಗಲಿ ಸೇರಿದಂತೆ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಜಿಲ್ಲೆಯ ಸಿರಗುಪ್ಪ, ಕಂಪ್ಲಿ, ಹಗರಿಬೊಮ್ಮನಹಳ್ಳಿ ಸೇರಿದಂತೆ ನಾನಾ ತಾಲೂಕುಗಳಲ್ಲಿ ಈರುಳ್ಳಿ, ಭತ್ತ, ಮೆಕ್ಕೆಜೋಳ ಸೇರಿದಂತೆ ನಾನಾ ಬೆಳೆಗಳು ಸಂಪೂರ್ಣ ನಾಶವಾಗಿದ್ದು,‌ಕೂಡಲೇ ಹಾನಿಗೀಡಾದ ಸ್ಥಳಗಳಲ್ಲಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ದೇಶಕ್ಕೆ ಅನ್ನ ನೀಡುವ ರೈತರಿಗೆ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಿಬರುದ್ರಪ್ಪ, ಭೋಜರಾಜ್ , ಎನ್.ರೆಡ್ಡಿ ಇತರರು ಉಪಸ್ಥಿತರಿದ್ದರು

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss