ಕೊಪ್ಪಳ: ಜಿಲ್ಲೆಯಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಮಳೆ ಹಿನ್ನೆಲೆ ಭತ್ತದ ಬೆಳೆಗಾರರಿಗೆ ಭಾರಿ ಅಘಾತವಾಗಿರುವ ಕಾರಣ ಜಿಲ್ಲೆಯಲ್ಲಿ ವಿಶೇಷ ಟಾಸ್ಕಫೋರ್ಸ್ ರಚಿಸಿ, ಸರ್ವೆ ಮಾಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ
ಎರಡು ದಿನದಲ್ಲಿ ಭತ್ತ ಬೆಳೆಯ ನಷ್ಟದ ಬಗ್ಗೆ ವರದಿ ನೀಡಲು ಸೂಚಿಸಿದ್ದಾರೆ. ರೈತರು ತಾವು ಬೆಳೆದ ಬೆಳೆ ಮಾರಾಟ ಮಾಡಲು ಯಾವುದೇ ತೊಂದರೆ ಇಲ್ಲ. ಈ ಬಗ್ಗೆ ಕೊಪ್ಪಳ ಜಿಲ್ಲಾಡಳಿತ ವಿಧಿಸಿದ್ದ ನಿಬಂಧನೆ ತೆರವು ಮಾಡಲು ಸೂಚಿಸಲಾಗಿದೆ.
ರೈತರು ಭತ್ತ ಮಾರಾಟ ಮಾಡಲು ಯಾವುದೇ ತೊಂದರೆ ಇಲ್ಲದಂತೆ ಪೊಲೀಸರು ಕ್ರಮ ಕೈಗೊಳ್ಳಬೇಕು ರೈತರೂ ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಚಟುವಟಿಕೆ ಮಾಡಬೇಕು. ಕೊರೋನಾ ವೈರಸ್ ತಡೆಯಲು ಸಾಮಾಜಿಕ ಅಂತರದಿಂದಲೇ ಸಾಧ್ಯ ಎಂದರು.