ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರಾಧಿಕಾರ(ಕಾಡಾ) ಅಧ್ಯಕ್ಷರಾಗಿ ಪವಿತ್ರ ರಾಮಯ್ಯ ಬುಧವಾರ ಅಧಿಕಾರ ಸ್ವೀಕರಿಸಿದರು.
ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕಾರ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಅಚ್ಚುಕಟ್ಟು ರೈತರ ಸಮಸ್ಯೆ ಪರಿಹಾರಕ್ಕೆ ಯತ್ನಿಸುತ್ತೇನೆ. ರೈತ ಹೋರಾಟದಿಂದಲೇ ಬಂದಿರುವ ತಮಗೆ ರೈತರ ಬಗ್ಗೆ ಕಾಳಜಿ ಇದೆ. ನಂಬಿಕೆ ಇರಿಸಿ ಕೊಟ್ಟಿರುವ ಅಧಿಕಾರವನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಎಸ್.ದತ್ತಾತ್ರಿ, ರೈತ ಸಂಘದ ಗೌರವಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ,ಬಳ್ಳಕೆರೆ ಸಂತೋಷ್ ಮುಂತಾದವರು ಇದ್ದರು.