Sunday, June 26, 2022

Latest Posts

ಭಯೋತ್ಪಾದಕರ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ, ಇಬ್ಬರು ಯೋಧರು ಹುತಾತ್ಮ: ಓರ್ವ ಭಯೋತ್ಪಾದಕ ಬಲಿ (Updated)

ಜಮ್ಮು ಕಾಶ್ಮೀರ: ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಾಕಾ ಪ್ರದೇಶದ ಬಳಿ ಉಗ್ರರು ಮತ್ತು ಸೇನೆಯ ನಡುವೆ ಗುಂಡಿನ ದಾಳಿ ನಡೆದಿದ್ದು, ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಸಿ.ಆರ್.ಪಿ.ಎಫ್ ಯೋಧರು ಹುತಾತ್ಮರಾಗಿದ್ದಾರೆ.

ಸೋಮವಾರ ಬೆಳಗ್ಗೆ ಸಿ.ಆರ್.ಪಿ.ಎಫ್ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಅಡಗಿ ಕುಳಿತ್ತಿದ್ದ ಭಯೋತ್ಪಾದಕರು ಗುಂಡು ಹಾರಿಸಿದ್ದು, ಇಬ್ಬರು ಸಿ ಆರ್ ಪಿ ಎಫ್ ಯೋಧರು ಮತ್ತು ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ.

ಸದ್ಯ ಪ್ರದೇಶದಲ್ಲಿ ಮತ್ತಷ್ಟು ಭಯೋತ್ಪಾದಕರನ್ನು ಪತ್ತೆಮಾಡುವಲ್ಲಿ ಸೇನೆ ನಿರತವಾಗಿದೆ ಎಂದು ವರದಿ ತಿಳಿಸಿದೆ. LeT ಉಗ್ರರು ಈ ದಾಳಿ ನಡೆಸಿದೆ ಎಂದು ನಂಬುತ್ತೇವೆ. ನಾವು ಭಯೋತ್ಪಾದಕರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತೇವೆ ಎಂದು ವಿಜಯ್ ಕುಮಾರ್, ಐಜಿ ತಿಳಿಸಿದ್ದಾರೆ.

ಚೆಕ್ ಪೋಸ್ಟ್ ನಲ್ಲಿ ಗುಂಡಿನ ದಾಳಿ ನಂತರ 3 ಭಯೋತ್ಪಾದಕರು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Update: ಬಾರಮುಲ್ಲಾದಲ್ಲಿ ದಾಳಿ ನಡೆಸಿ ಇಬ್ಬರು ಸಿ ಆರ್ ಪಿ ಎಫ್ ಯೋಧರು ಹಾಗೂ ಓರ್ವ ಪೊಲೀಸ್ ಅಧಿಕಾರಿಯನ್ನು ಬಲಿಪಡೆದ ಓರ್ವ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿದೆ.

ಹತ್ಯೆಗೀಡಾದ ಭಯೋತ್ಪಾದಕನ ಶವ ಹಾಗೂ ಅವನಿಂದ ಎಕೆ -47 ರೈಫಲ್ ಅನ್ನು ಸೇನೆ ವಶಪಡಿಸಿಕೊಂಡಿದೆ. ಕಾರ್ಯಾಚರಣೆ ಮುಂದಚುವರೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss