ಭಯೋತ್ಪಾದಕ ದಾಳಿ ನಡೆಸಲು ಸಂಚು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

0
174

ನವದೆಹಲಿ: ದೇಶದ ರಾಜಧಾನಿಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಲಾಗಿದೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಯೊಂದು ಚಲನವಲನಗಳ ಮೇಲೆ ಹದ್ದಿನಕಣ್ಣಿರಿಸಲಾಗಿದೆ.
ನಾಲ್ಕೈದು ಉಗ್ರರು ಈಗಾಗಲೇ ಭಯೋತ್ಪಾದಕ ದಾಳಿ ನಡೆಸಲು ದೆಹಲಿಗೆ ನುಸುಳಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಂದೋಬಸ್ತ್ ಇನ್ನಷ್ಟು ಹೆಚ್ಚಿಸಲಾಗಿದೆ. ಆಯಕೆಟ್ಟಿನ ಸ್ಥಳಗಳಲ್ಲಿ ಭದ್ರತಾ ಪಡೆಗಳು ವ್ಯಾಪಕ ನಿಗಾ ಇರಿಸಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದ್ದು, ಆಸ್ಪತ್ರೆ ಕಟ್ಟಡ, ಜನನಿಬಿಡ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕ್ರೈ ಬ್ರಾಂಚ್, ವಿಶೇಷ ದಳ ಸೇರಿದಂತೆ ದೆಹಲಿಯ 15 ಪೊಲೀಸ್ ವಿಭಾಗಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

LEAVE A REPLY

Please enter your comment!
Please enter your name here