Friday, August 19, 2022

Latest Posts

ಭಾನುವಾರದ ಲಾಕಡೌನ್ ಸಂಪೂರ್ಣ ಯಶಸ್ಸು.. ರಸ್ತೆಗಿಳಿಯದ ಜನರು, ಆಟೋ ಸಂಚಾರ ಸಂಪೂರ್ಣ ಸ್ತಬ್ಧ

ಕಲಬುರಗಿ: ಕೊರೊನಾ ತಡೆಗಟ್ಟಲು ರಾಜ್ಯಾದ್ಯಂತ ಇಂದು ಸಂಪೂರ್ಣ ಲಾಕ್​ಡೌನ್ ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲಬುರಗಿ ಇಂದು ಸಂಪೂರ್ಣ ಲಾಕ್​ಡೌನ್​ಬಹುತೇಕ ರಸ್ತೆಗಳಲ್ಲಿ ಅಷ್ಟಾಗಿ ವಾಹನಗಳು ಕಾಣಿಸದೆ ಸಂಚಾರ ವಿರಳವಾಗಿದೆ. ತುರ್ತು ಸೇವೆಗಳಿಗೆ ಹೊರತುಪಡಿಸಿ ಬಹುತೇಕ ಅಂಗಡಿ ಮುಂಗಟ್ಟು ಬಂದ್​​ ಮಾಡಲಾಗಿದೆ. ಡಿಸಿಪಿ, ಎಸಿಪಿ, ಪಿಎಸ್​ಐ ಸೇರಿ ಸುಮಾರು 700 ಪೊಲೀಸರನ್ನು ಬಂದೋಬಸ್ತ್​ಗಾಗಿ ನಿಯೋಜನೆ ಮಾಡಲಾಗಿದೆ. ಮೂರು ಕೆ.ಎಸ್.ಆರ್.ಪಿ., 9 ಸಿ.ಎ.ಆರ್ ತುಕಡಿ ನಿಯೋಜನೆ ಮಾಡಲಾಗಿದೆ. ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಿಲ್ಲೆಯಾದ್ಯಂತ ನಾಳೆ ಬೆಳಗ್ಗೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!