ಹೊಸದಿಲ್ಲಿ: ಮಾನವ ಹಕ್ಕುಗಳ ಅಡಿಯಲ್ಲಿ ಭಾರತದಲ್ಲಿ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮ್ನೆಸ್ಟಿ ಇಂಟರ್ನ್ಯಾಷನಲ್ ಮಂಗಳವಾರ ಪ್ರಕಟಿಸಿದೆ.
ಮಾನವ ಹಕ್ಕುಗಳ ಸಂಘಟನೆಯು ತನ್ನ ಬ್ಯಾಂಕ್ ಖಾತೆಗಳನ್ನು ಭಾರತ ಸರ್ಕಾರ ಸಂಪೂರ್ಣ ಸ್ಥಗಿತಗೊಳಿಸಿದ ಬಳಿಕ ಅಮ್ನೆಸ್ಟಿ ಈ ನಿರ್ಧಾರ ಕೈಗೊಂಡಿದೆ.
ಕಳೆದ ಎರಡು ವರ್ಷಗಳಲ್ಲಿ ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಮುಂದಾಗಿದ್ದು, ಕಾನೂನಿನ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಸರ್ಕಾರ ಈ ಕ್ರಮ ಕೈಗೊಂಡಿರುವುದು ಬೇಸರದ ಸಂಗತಿ ಎಂದು ಆಮ್ನೆಸ್ಟಿ ತಿಳಿಸಿದೆ.
ಮಾನವ ಹಕ್ಕುಗಳ ಸಂಸ್ಥೆಯನ್ನು ಸ್ಥಗಿತಗೊಳಿಸಿದೆ ಎಂದು ಆಮ್ನೆಸ್ಟಿ ಗುಡುಗಿದ್ದು, ಕಳೆದ ವರ್ಷ ವಿದೇಶಗಳಿಂದ ದೇಣಿಗೆ ಪಡೆದ ಆರೋಪದ ಮೇರೆಗೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಆಮ್ನೆಸ್ಟಿ ಮೇಲೆ ದಾಳಿ ನಡೆಸಿ ವಿಚಾರಣೆ ಮಾಡಿತ್ತು.