Thursday, August 11, 2022

Latest Posts

ಭಾರತದ ಶಾಂತಿ ಸ್ಥಾಪನೆ ಯತ್ನಕ್ಕೆ ಪಾಕಿಸ್ತಾನ ಸದಾ ಮೋಸ ಮಾಡಿದೆ: ಸಚಿವ ರಾಮದಾಸ ಅಠವಳೆ

ನವದೆಹಲಿ: ಭಾರತದ ಶಾಂತಿ ಸ್ಥಾಪನೆ ಯತ್ನಕ್ಕೆ ಪಾಕಿಸ್ತಾನವು ಸದಾ ಮೋಸ ಮಾಡಿದೆ ಎಂದು ಕೇಂದ್ರ ಸಚಿವ ರಾಮದಾಸ ಅಠವಳೆ ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಗಡಿಯಲ್ಲಿ ಪಡೆಗಳನ್ನು ಹೆಚ್ಚಿಸುವ ಬದಲು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು, ಶಾಂತಿ ಕಾಪಾಡಲು ಯತ್ನಿಸಬೇಕು ಎಂದಿದ್ದರು.

ಈ ಮಾತಿಗೆ ಪ್ರತಿಕ್ರಿಯಿಸಿದ ರಾಮದಾಸ ಅಠವಳೆ, ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವಾಗ ಪಾಕಿಸ್ತಾನದ ಪ್ರಧಾನಿಯನ್ನೂ ಆಹ್ವಾನಿಸಲಾಗಿತ್ತು ಆಗ ಪಾಕಿಸ್ತಾನದ ಪ್ರಧಾನಿ ಹೇಳಿದ್ದೇನು ಈಗ ಮಾಡುತ್ತಿರುವುದೇನು? ಎಂದು ಸಚಿವರು ಪ್ರಶ್ನಿಸಿದರು.

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಭಾರತ ಪಾಕಿಸ್ತಾನದೊಂದಿಗೆ ಮಾತುಕತೆಗೆ ಸಿದ್ಧವಿದೆ. ಆದರೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಿಂದಿರುಗಿಸಬೇಕು ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss