Sunday, August 14, 2022

Latest Posts

ಭಾರತದ ಸಂಸ್ಕೃತಿ, ಪರಂಪರೆಯನ್ನು ಜಗತ್ತಿಗೆ ಸಾರಿದ ಮಹನೀಯ ಸ್ವಾಮಿ ವಿವೇಕಾನಂದರು: ಅರುಣ್

ಹೊಸ ದಿಗಂತ ವರದಿ, ಶಿವವೊಗ್ಗ:

ಈ ನೆಲದಿಂದ ಎಲ್ಲವನ್ನೂ ಪಡೆದ ಯುವ ಜನರು ಈ ಸಮಾಜಕ್ಕಾಗಿ ಏನಾದರೂ ಕೊಡುಗೆ ನೀಡುವ ಸಂಕಲ್ಪ ಮಾಡಬೇಕಾದ, ವಿಶಾಲ ಮನೋಭಾವ ಪ್ರದರ್ಶಿಸಬೇಕಾದ ದಿನ ಇದಾಗಿದೆ ಎಂದು ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ವಿವೇಕಾನಂದರ 158ನೇ ಜಯಂತಿ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಭಾರತದ ತತ್ವಜ್ಞಾನ, ಯೋಗ, ವೇದಾಂತ ಸೇರಿದಂತೆ ಇಲ್ಲಿನ ಇತಿಹಾಸ, ಸಂಸ್ಕೃತಿ ಮತ್ತು ಭವ್ಯ ಪರಂಪರೆಯನ್ನು ಜಗತ್ತಿಗೆ ಸಾರಿದ ಮಹನೀಯ ಸ್ವಾಮಿ ವಿವೇಕಾನಂದರು. ಮನುಕುಲದ ಏಳಿಗೆಗಾಗಿ ಶ್ರಮಿಸಿ ಪ್ರಬುದ್ಧ ವ್ಯಕ್ತಿ. ಇಲ್ಲಿನ ಜನರ ಉದ್ಧಾರಕ್ಕಾಗಿ ದುಡಿಯುವ ಅದಮ್ಯ ತುಡಿತ ೊಂದಿದ್ದರು ಎಂದರು.
ಮಹಾನಗರಪಾಲಿಕೆ ಮೇಯರ್ ಸುವರ್ಣಶಂಕರ್, ಜಿಪಂ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಮಹಾನಗರಪಾಲಿಕೆ ಉಪಮೇಯರ್ ಸುರೇಖಾ ಮುರಳೀಧರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಮಹಾನಗರಪಾಲಿಕೆ ಸದಸ್ಯರಾದ ಚನ್ನಬಸಪ್ಪ, ಜ್ನಾನೇಶ್ವರ್, ಪ್ರಭಾಕರ್, ವಿಶ್ವಾಸ್, ನಾಗರಾಜ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss