Tuesday, August 16, 2022

Latest Posts

ಭಾರತೀನಗರ| ಕೆ.ಶೆಟ್ಟಹಳ್ಳಿಯಲ್ಲಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕಳವು

ಭಾರತೀನಗರ: ಮಂಡ್ಯದ ಅರ್ಕೇಶ್ವರ ದೇವಸ್ಥಾನದ ಅರ್ಚಕರ ಕೊಲೆ ಹಾಗೂ ಹುಂಡಿ ಹಣ ದರೋಡೆ ಪ್ರಕರಣ ಮಾಸುವ ಮುನ್ನವೇ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕದ ಛಾಯೆ ಮಾಡಿಮಾಡಿದೆ.
ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ನಾಲ್ಕೈದು ಮಂದಿಯ ತಂಡ ಬಾಗಿಲ ಸರಳನ್ನು ಮುರಿದು ಒಳಗೆ ಹೋಗಿ ಹುಂಡಿಯಲ್ಲಿದ್ದ 80 ಸಾವಿರಕ್ಕೂ ಹೆಚ್ಚು ಹಣವನ್ನು ದೋಚಿ ಗ್ರಾಮದ ಹೊರವಲಯದಲ್ಲಿ ಹುಂಡಿಯನ್ನು ಬೀಸಾಡಿ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಲ್ಲೆಯಲ್ಲಿ ಕಳ್ಳತನಕ್ಕೆ ದೇವಸ್ಥಾನಗಳನ್ನೇ ಟಾರ್ಗೇಟ್ ಮಾಡಲಾಗುತ್ತಿದ್ದು ದರೋಡೆಕೋರರ ತಂಡ ಜಿಲ್ಲೆ ಬೀಡುಬಿಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ.
ಈ ಕೃತ್ಯಕ್ಕೆ ಸಂಬಂಧಿಸಿದ ಕಳ್ಳರನ್ನು ಕೂಡಲೇ ಬಂಧಿಸಿ ನ್ಯಾಯಕೊಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಸಬ್‍ಇನ್ಸ್‍ಪೆಕ್ಟರ್ ಶೇಷಾದ್ರಿ ಹಾಗೂ ಸರ್ಕಲ್ ಇನ್ಸ್‍ಪೆಕ್ಟರ್ ಶಿವಮಲವಯ್ಯ ಭೇಟಿನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಕೆ.ಎಂ.ದೊಡ್ಡಿಯಲ್ಲಿ ಪೊಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss