Tuesday, June 28, 2022

Latest Posts

ಭಾರತೀಯ ಒಲಿಂಪಿಕ್ಸ್ ಆಟಗಾರರಿಗೆ ಎದ್ದು ನಿಂತು ಚಪ್ಪಾಳೆ ತಟ್ಟಿ ಪ್ರೋತ್ಸಾಹ ನೀಡಿದ ಪ್ರಧಾನಿ ಮೋದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಸರಳವಾಗಿ ಚಾಲನೆ ನೀಡಲಾಗಿದ್ದು, ಭಾರತದ ಪರ ಆಯ್ದ
20 ಮಂದಿ ಆಟಗಾರರು ಪಥಸಂಚಲದಲ್ಲಿ ಭಾಗವಹಿಸಿದ್ದರು. ಜಪಾನ್‍ನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಹಾಕಿ ತಂಡದ ನಾಯಕ ಮನ್‍ಪ್ರೀತ್ ಸಿಂಗ್ ಮತ್ತು ಬಾಕ್ಸರ್ ಮೇರಿ ಕೋಮ್ ಭಾರತ ತ್ರಿವರ್ಣ ಧ್ವಜ ಹಿಡಿದು  ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದರು.
ಈ ಸಂದರ್ಭ ಕಚೇರಿಯಲ್ಲಿ ಟಿವಿ ಮೂಲಕ ಕ್ರೀಡಾಕೂಟ ನೋಡುತ್ತಿದ್ದ ಪ್ರಧಾನಿ ಮೋದಿಯವರು ತೆರೆ ಮೇಲೆ ಭಾರತದ
ಆಟಗಾರರು ಬರುತ್ತಿದ್ದ ವೇಳೆ ಎದ್ದು ನಿಂತು ಚಪ್ಪಾಳೆ ತಟ್ಟಿ ಪ್ರೋತ್ಸಾಹ ನೀಡಿದರು.
ಭಾರತದ ಆಟಗಾರರು ಕ್ರೀಡಾಂಗಣಕ್ಕೆ ಕಾಲಿಡುತ್ತಿದ್ದಂತೆ ಟೋಕಿಯೋದಲ್ಲಿರುವ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಆಟಗಾರರನ್ನು ಚಪ್ಪಾಳೆ ತಟ್ಟಿ ಸ್ವಾಗತಿಸುವ ಮೂಲಕ ಹುರಿದುಂಬಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss