ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತೀಯ ಭಜನಾ ಗಾಯಕ ನರೇಂದ್ರ ಚಂಚಲ್(80) ಶುಕ್ರವಾರ ನಿಧನರಾಗಿದ್ದಾರೆ. ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದಾಗಿ ದೆಹಲಿಯ ಅಪೊಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 12.15ರ ಸುಮಾರಿಗೆ ನರೇಂದ್ರ ಚಂಚಲ್ ಅವರು ಕೊನೆಯುಸಿರೆಳೆದಿದ್ದಾರೆ.
ಭಾರತೀಯ ಭಜನಾ ಗಾಯಕ ನರೇಂದ್ರ ಚಂಚಲ್ ಅವರ ನಿಧನಕ್ಕೆ, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಟ್ವಿಟ್ ನಲ್ಲಿ ‘ನರೇಂದ್ರ ಚಂಚಲ್ ಅವರ ಸಾವಿನ ಸುದ್ದಿ ಕೇಳಿ ತುಂಬಾ ದುಃಖವಾಗಿದೆ. ಭಕ್ತಿ ಗೀತೆಗಳ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಹೇಳಿದ್ದಾರೆ.