ಕುಂಬಳೆ: ಭಾರತ – ಚೀನಾ ಗಡಿಯ ಗಾಲ್ವಾನ್ ಕಣಿವೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಚೀನಿ ಸೈನಿಕರನ್ನು ಸದೆ ಬಡಿದು ರಾಷ್ಟ್ರಕ್ಕಾಗಿ ಹುತಾತ್ಮರಾದ ತಾಯಿ ಭಾರತಿಯ ವೀರ ಪುತ್ರರಿಗೆ ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ವತಿಯಿಂದ ಶ್ರದ್ಧಾಂಜಲಿ ಹಾಗೂ ಕುತಂತ್ರಿ ಚೀನಾದ ವಿರುದ್ಧ ಘೋಷಣೆ ಕೂಗಿ ಚೀನಾದ ಧ್ವಜವನ್ನು ಉರಿಸುವ ಮೂಲಕ ಕುಂಬಳೆ ಪೇಟೆಯಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಅಧ್ಯಕ್ಷ ಕೆ.ಸುಧಾಕರ ಕಾಮತ್ ವಹಿಸಿದರು. ಬಿಜೆಪಿ ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್ ಮುಖ್ಯ ಭಾಷಣ ಮಾಡಿದರು. ಒಬಿಸಿ ಮೋರ್ಚಾದ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯ ಶಶಿ ಕುಂಬಳೆ, ಬಿಜೆಪಿ ಪಂಚಾಯತ್ ಸಮಿತಿಯ ಉಪಾಧ್ಯಕ್ಷ ಕೆ.ಸುಜಿತ್ ರೈ , ಜನಪ್ರತಿನಿಧಿಗಳಾದ ಪುಷ್ಪಲತಾ, ಪ್ರೇಮಲತಾ, ಯುವಮೋರ್ಚಾ ಪಂಚಾಯತ್ ಸಮಿತಿಯ ಅಧ್ಯಕ್ಷ ಪ್ರದೂಷ್ ನಾಯ್ಕಾಪು
ಮೊದಲಾದವರು ಉಪಸ್ಥಿತರಿದ್ದರು.
ಯುವಮೋರ್ಚಾ ಮಂಡಲ ಕಾರ್ಯದರ್ಶಿ ಪ್ರದೀಪ್ ಬಂಬ್ರಾಣ ಸ್ವಾಗತಿಸಿ, ಬಿಜೆಪಿ ಪಂಚಾಯತ್ ಸಮಿತಿಯ
ಉಪಾಧ್ಯಕ್ಷ ಮಹೇಶ್ ಪುಣಿಯೂರು ವಂದಿಸಿದರು.