Tuesday, July 5, 2022

Latest Posts

ಭಾರತ-ಅಮೆರಿಕ| ಉಭಯ ರಾಷ್ಟ್ರಗಳ ಸಂಬಂಧ ಗಟ್ಟಿಯಾಗಿದೆ: ವಿದೇಶಾಂಗ ಸಚಿವ ಎಸ್. ಜಯಶಂಕರ್

ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತಷ್ಟು ಸದೃಢ ಮತ್ತು ಸ್ಥಿರವಾಗಿ ಬೆಳೆದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ತಿಳಿಸಿದ್ದಾರೆ.

ಚೀನಾ ಹಾಗೂ ಭಾರತದ ಗಡಿ ಸಂಘರ್ಷದ ನಡುವೆ ಭಾರತ ಅಮೆರಿಕ ಉನ್ನತ ಮಟ್ಟದ ಸಭೆ ನಡೆಸಿದೆ. ಭಾರತ ಹಾಗೂ ಅಮೆರಿಕ ನಡುವಿನ ಸಂಬಂಧ ಮತ್ತಷ್ಟು ಬಲಗೊಂಡಿದೆ. ನಿಯಮ ಆಧಾರಿತ ಅಂತಾರಾಷ್ಟ್ರೀಯ ಕ್ರಮಗಳನ್ನು ಎತ್ತಿಹಿಡಿಯುವುದು ಮುಖ್ಯವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜಯಶಂಕರ್ ತಿಳಿಸಿದ್ದಾರೆ.

ಈ ವೇಳೆ ವಿದೇಶಾಂಗ ಸಚಿವ ಎಸ್. ಜಯಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಮೆರಿಕ ರಾಜ್ಯ ಕಾರ್ಯದರ್ಶಿ ಮೈಕ್ ಪಾಂಪಿಯೋ, ಅಮೆರಿಕ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಭಾಗಿಯಾಗಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss