ಹೊಸದಿಲ್ಲಿ: ಭಾರತದಕ್ಕೆ ಬಂದಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ, ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ನೊಂದಿಗೆ ಇಂದು ಭಾರತೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸಭೆ ನಡೆಸಿದರು.
ದೆಹಲಿಯ ಸೌತ್ ಬ್ಲಾಕ್ ನಲ್ಲಿ ಸಭೆ ನಡೆಸಲಾಗಿದ್ದು, ಉಭಯ ದೇಶಗಳ ಕಾರ್ಯತಂತ್ರದ ಅನೇಕ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಸುರಕ್ಷಿತ, ಸ್ಥಿರ ಮತ್ತು ನಿಯಮ ಆಧಾರಿತ ಪ್ರಾದೇಶಿಕ ಮತ್ತು ಜಾಗತಿಕ ಭದ್ರತಾ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂವಹನ ನಡೆಸಿದರು. ಎಲ್ಲಾ ಕ್ಷೇತ್ರಗಳ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಎರಡೂ ರಾಷ್ಟ್ರಗಳು ವ್ಯಕ್ತಪಡಿಸಿದೆ.