Thursday, August 11, 2022

Latest Posts

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ ಗಡಿ ವಿಚಾರದಲ್ಲಿ ಬಹಳ ತೊಂದರೆಗಳನ್ನು ಎದುರಿಸುತ್ತಿದೆ. ಈ ಸಂಬಂಧ ನಾವು ಸಹಾಯ ಮಾಡುಬಹುದಾದರೆ ಅದಕ್ಕೆ ಅಮೆರಿಕಾ ಸಿದ್ಧ. ಗಡಿ ಸಮಸ್ಯೆಯನ್ನು ಆಶಾದಾಯಕವಾಗಿ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕಳೆದ ಮೇ ತಿಂಗಳಿನಲ್ಲಿ ಚೀನಾ ಮತ್ತು ಭಾರತದ ಗಡಿ ವಿಷಯವಾಗಿ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಮುಂದಾಗಿದ್ದರು. ಆದರೆ ಭಾರತ ಅದನ್ನು ತಿರಸ್ಕರಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss