ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್
ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ನಾಲ್ಕನೇ ದಿನದಾಟ ಆರಂಭಿಸಿರುವ ಟೀಮ್ ಇಂಡಿಯಾ ಆರಂಭದಲ್ಲೇ ರವೀಂದ್ರ ಜಡೇಜಾ (17) ಮತ್ತು ರಹಾನೆ (0) ವಿಕೆಟ್ಗಳನ್ನು ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಅನುಭವಿಸಿದೆ.
ಮೂರನೇ ದಿನದಾಟದ ಅಂತ್ಯದ ವೇಳೆ ಜಡೇಜಾ ಅಜೇಯ (9) ರನ್ ಮಾಡಿ ಕ್ರೀಸ್ ಕಾಯ್ದುಕೊಂಡಿದ್ದರು. ಇಂದು ಕೇವಲ 8 ರನ್ ಗಳಿಸಿ ಕ್ರೀಸ್ ವೋಕ್ಸ್ಗೆ ವಿಕೆಟ್ ಒಪ್ಪಿಸಿದರು. ನಂತರ ಜೊತೆಯಾದ ಅಜಿಂಕ್ಯ ರಹಾನೆ ಯಾವುದೇ ರನ್ ಗಳಿಲ್ಲದೆ ವೋಕ್ಸ್ ಗೆ ವಿಕೆಟ್ ಒಪ್ಪಿಸಿ ಮತ್ತೊಮ್ಮ ನಿರಾಸೆ ಮೂಡಿಸಿದರು. ನಾಯಕ ಕೊಹ್ಲಿ ಕೂಡ 44 ರನ್ ಗಳಿಗೆ ವಿ ಓಟ್ ಆದರು. ಪ್ರಸ್ತುತ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 320 ರನ್ ಗಳಿಸಿದ್ದು, 221 ರನ್ ಗಳ ಮುನ್ನಡೆ ಪಡೆದಿದೆ.