Sunday, April 11, 2021

Latest Posts

ಭಿಕ್ಷುಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಮಂಡ್ಯ : ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಭಿಕ್ಷುಕ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ಜರುಗಿದೆ.
ಮಂಡ್ಯದ ಬಾಟ ಶೋ ರೂಂ ಎದುರಿನ ಫುಟ್‌ಪಾತ್‌ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೆ ಕಳೆದ ರಾತ್ರಿ ದುಷ್ಕರ್ಮಿಗಳು ಅತ್ಯಾಚಾರ ವೆಸಗಿದ್ದಾರೆ. ನಂತರ ಅದೇ ಸ್ಥಳದಲ್ಲಿ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ನಂತರ ಬೆಳಗ್ಗೆ ವಿಷಯ ತಿಳಿದ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss