ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ಮಧ್ಯ ಬಾಗ್ದಾದ್ ಮಾರುಕಟ್ಟೆಯಲ್ಲಿ ಭೀಕರ ಆತ್ಮಾಹುತಿ ದಾಳಿ ನಡೆದಿದೆ. ಈ ಘಟನೆಯಲ್ಲಿ 6 ಜನ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ.
ಬಾಗ್ದಾದ್ʼನ ತಯಾರನ್ ಚೌಕದ ಜನನಿಬಿಡ ಮಾರುಕಟ್ಟೆಯೊಳಗೆ ಆತ್ಮಾಹುತಿ ದಾಳಿಕೋರನೊಬ್ಬ ಸ್ಫೋಟಕ ಬಳಸಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.