ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಧಾರವಾಡ ಜಿಲ್ಲೆಯ ಅಣ್ಣಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಕ್ರೂಜರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಭೀಕರ ಘಟನೆ ನಡೆದಿದೆ.
ಅತಿ ವೇಗವಾಗಿ ಚಲಿಸುತ್ತಿದ್ದ ಕ್ರೂಸರ್ ಮತ್ತು ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.