Monday, July 4, 2022

Latest Posts

ಭೀಕರ ರಸ್ತೆ ಅಪಘಾತ: 12 ಮಂದಿಗೆ ಗಾಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರಪ್ರದೇಶದಲ್ಲಿ ಆರು ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 12 ಮಂದಿ ಗಾಯಗೊಂಡಿದ್ದಾರೆ.

ಯಮುನಾ ಎಕ್ಸ್ ಪ್ರೆಸ್ ವೇ ಬಳಿ ಈ ದುರ್ಘಟನೆ ಸಂಭವಿಸಿದ್ದು, ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಬದಿಯಲ್ಲಿದ್ದ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ಹೀಗೆ ಕಾರು, ಬಸ್, ಲಾರಿ ಸೇರಿದಂತೆ ಆರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟವರ ಸಂಪೂರ್ಣ ಮಾಹಿತಿ ಇನ್ನೂ ದೊರೆತಿಲ್ಲ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ರಸ್ತೆ ತೆರವುಗೊಳಿಸುವಲ್ಲಿ ನಿರತರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss