ವಿಜಯಪುರ: ಮಹಾರಾಷ್ಟ್ರ ರಾಜ್ಯದಲ್ಲಿ ಆಗಿರುವ ಮಳೆಯಿಂದ ಜಿಲ್ಲೆಯ ಭೀಮಾ ಹಾಗೂ ಕೃಷ್ಣಾ ನದಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ಪಾತ್ರಕ್ಕೆ ಜನ, ಜಾನುವಾರು ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿ ಪಾತ್ರಕ್ಕೆ 2.50 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದ್ದು, ಇನ್ನು ಭೀಮಾ ನದಿಯಲ್ಲಿ 13.675 ಕ್ಯೂಸೆಕ್ ನೀರು ಹರಿಯುತ್ತಿದೆ. ಆದ್ದರಿಂದ ನದಿ ಪಾತ್ರದ ಎಲ್ಲ ಗ್ರಾಮಗಳಲ್ಲಿ ಪರಿಹಾರ ಕಾರ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಜಿಲ್ಲಾಡಳಿತದಿಂದ ಎಲ್ಲ ರೀತಿಯ ಮುಂಜಾಗೃತಿ ಕ್ರಮ ಕೈಗೊಳ್ಳಲಾಗಿದೆ. ಭೀಮಾ ಹಾಗೂ ಕೃಷ್ಣಾ ನದಿ ಪಾತ್ರದ ಜನರು ಧೈರ್ಯ ಹಾಗೂ ಜಾಗರೂಕತೆಯಿಂದಿರಬೇಕು. ಪರಿಹಾರ ಕಾರ್ಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯ 24*7 ಕಂಟ್ರೋಲ್ ರೂಮ್ (ದೂರವಾಣಿ ಸಂಖ್ಯೆ: 08352-221216) ಹಾಗೂ ಟೋಲ್ ಫ್ರೀ ನಂಬರ್ (1077) ಗೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.