Monday, August 8, 2022

Latest Posts

ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ : ಸಚಿವ ನಾರಾಯಣಗೌಡ

ಮೈಸೂರು: ರಾಜ್ಯದಲ್ಲಿ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದು ಅವಶ್ಯವಾಗಿದೆ ಎಂದು ತೋಟಗಾರಿಕೆ, ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೇರೆ ಯಾವುದೇ ರಾಜ್ಯದಲ್ಲಿ ಇಲ್ಲದ ನಿಬಂಧನೆಗಳು ನಮ್ಮಲ್ಲಿದ್ದವು. ಆದ್ದರಿಂದ ಕಾಯ್ದೆಯನ್ನು ಸರಳೀಕರಣ ಮಾಡಬೇಕಾಗಿತ್ತು. ಹಾಗಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ನಮ್ಮ ಬಳಿ ಇರುವ ಭೂಮಿಯನ್ನು ಯಾರೂ ಕಿತ್ತುಕೊಳ್ಳಲು ಆಗಲ್ಲ, ಹೀಗಾಗಿ ಈ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ತೊಂದರೆ ಆಗುತ್ತೆಎಂಬುದೆಲ್ಲಾ ಸುಳ್ಳು ಎಂದರು.
ಎಚ್.ವಿಶ್ವನಾಥ್‌ಗೆ ಟಿಕೆಟ್ ಸಿಗುತ್ತೆ
ಮಾಜಿ ಸಚಿವ ಎಚ್.ವಿಶ್ವನಾಥ್ ಅವರಿಗೆ ಎಂಎಲ್‌ಸಿ ಟಿಕೆಟ್ ಸಿಗುತ್ತೆ ಎಂಬುದು ನಮ್ಮ ಭಾವನೆಯಾಗಿದೆ. ಪಕ್ಷದ ಹೈಕಮಾಂಡ್ ಕೂಡ ಅದನ್ನೇ ನಿರ್ಧಾರ ಮಾಡಲಿದೆ. ನಮ್ಮ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವುದು ನಿಜ. ಆದರೆ ಎಲ್ಲವೂ ಅಂದುಕೊoಡoತೆ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತ್ತೆ ಲಾಕ್‌ಡೌನ್ ಅವಶ್ಯಕತೆಯಿಲ್ಲ  
ಕೊರೋನಾ ವೈರಸ್ ಪವರ್ ಕುಗ್ಗಿದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಹಾಗಾಗಿ ಕೊರೋನಾ ಸೋಂಕು ಹರುಡುವಿಕೆ ನಿಯಂತ್ರಣಕ್ಕಾಗಿ ಮತ್ತೆ ಲಾಕ್‌ಡೌನ್ ಮಾಡುವ ಅವಶ್ಯಕತೆಯಿಲ್ಲ ಎಂದು ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದಿಂದ ಬಂದವರಿoದ ಸೋಂಕು ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೊಳಚೆ ಪ್ರದೇಶವಿದೆ. ಅಲ್ಲಿನ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಅಲ್ಲಿಂದ ರಾಜ್ಯಕ್ಕೆ ಬರುತ್ತಿರುವವರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ವೈದ್ಯರು ಕೊರೋನಾ ಪವರ್ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಅವಶ್ಯಕತೆಯಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss