Saturday, July 2, 2022

Latest Posts

ಮಂಕಿ ಸೀನನಾದ ಡಾಲಿ ಧನಂಜಯ್

ಶಿವಣ್ಣ ಜೊತೆ ಟಗರು ಸಿನಿಮಾದಲ್ಲಿ ಅಭಿನಯಿಸಿದ ನಂತರ ಧನಂಜಯ್ ಡಾಲಿ ಆಗಿಯೇ ಖ್ಯಾತರಾಗಿದ್ದರು. ಧನಂಜಯ್ ಎನ್ನುವುದಕ್ಕಿಂತ ಡಾಲಿ ಎಂದರೆ ಥಟ್ ಅಂತ ಗೊತ್ತಾಗುತ್ತೆ. ಧನಂಜಯ್ ಈಗ ಮತ್ತೆ ಹೆಸರು ಬದಲಾಯಿಸಿಕೊಂಡಿದ್ದಾರೆ. ಹೌದು, ಡಾಲಿ ಈಗ ಮಂಕಿ ಸೀನ ಆಗಿದ್ದಾರೆ. ಟ್ವಿಟರ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಡಾಲಿ, ಮಂಕಿ ಸೀನ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಇದಕ್ಕೆ ಕಾರಣ ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ. ಈ ಚಿತ್ರದಲ್ಲಿ ಡಾಲಿ ಮಂಕಿ ಸೀನನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಈ ಪಾತ್ರದ ಹೆಸರನ್ನೆ ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಬಳಸಿದ್ದಾರೆ. ಚಿತ್ರಕ್ಕೆ ಪ್ರಮೋಷನ್ ಮಾಡುವ ಉದ್ದೇಶದಿಂದ ಮಂಕಿ ಸೀನನ ಹೆಸರನ್ನು ಎಲ್ಲ ಕಡೆ ಬಳಸುವ ಮೂಲಕ ಸಿನಿಮಾ ಪ್ರಮೋಟ್ ಮಾಡುತ್ತಿದ್ದಾರೆ. ಡಾಲಿ ಪಾತ್ರದ ಹಾಗೆ ಈ ಮಂಕಿ ಸೀನನ ಪಾತ್ರವು ಫೇಮಸ್ ಆಗುತ್ತಾ, ಡಾಲಿ ಹೋಗಿ ಮಂಕಿ ಸೀನ ಆಗುತ್ತಾರಾ ಧನಂಜಯ್ ಎನ್ನುವುದು ಕುತೂಹಲ ಮೂಡಿಸಿದೆ. ಈಗಾಗಲೇ ರಿಲೀಸ್ ಆಗಿರುವ ಫಸ್ಟ ಲುಕ್ ಮತ್ತು ಟೀಸರ್ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದೆ. ಧನಂಜಯ್ ಭಯಾನಕ ಲುಕ್ ಗೆ ಮಾಸ್ ಪ್ರಿಯರು ಫಿದಾ ಆಗಿದ್ದಾರೆ. ಪುಟ್ಟ ಟೀಸರ್ ಒಂದು ಸಖತ್ ಭಯಾನಕವಾಗಿದೆ ಎಂದರೆ ಇನ್ನು ಸಿನಿಮಾ ಹೇಗಿರಲಿದೆ ಎನ್ನುವುದು ಪ್ರೇಕ್ಷಕರ ಕುತೂಹಲ. ಸುಕ್ಕ ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ನಾಳೆ ತೆರೆಗೆ ಬರುತ್ತಿದೆ. ಚಿತ್ರದಲ್ಲಿ ಧನಂಜಯ್‌ಗೆ ನಾಯಕಿಯಾಗಿ ನಿವೇದಿತಾ, ಅಮೃತಾ ಮತ್ತು ಸಪ್ತಮಿ ಕಾಣಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss