Monday, August 15, 2022

Latest Posts

ಮಂಗಳವಾರ ಕೊರೋನಾ ಸೋಂಕಿನಿಂದ ಕಲಬುರಗಿ ನಗರದಲ್ಲಿ‌ ಮತ್ತಿಬ್ಬರು ನಿಧನ

ಕಲಬುರಗಿ:ಕೊರೋನಾ ಸೋಂಕಿನಿಂದ ಕಲಬುರಗಿ ನಗರದಲ್ಲಿ ಮತ್ತಿಬ್ಬರು ನಿಧನರಾಗಿರುವ ಬಗ್ಗೆ ಮಂಗಳವಾರ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಇದೂವರೆಗೆ ಮೃತರಾದವರ ಸಂಖ್ಯೆ 113ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ. ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ಎಂ.ಎಸ್.ಕೆ.ಮಿಲ್ (ಮೋಲಾಲಿ ಕಟ್ಟಾ) ಪ್ರದೇಶದ 35 ವರ್ಷದ ಮಹಿಳೆ (P-132727) ಆ.1 ರಂದು ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ರಾಮ‌ ನಗರದ 60 ವರ್ಷದ ವೃದ್ಧೆ (P-141524) ಜು. 30 ರಂದು ಆಸ್ಪತ್ರೆಗೆ ದಾಖಲಾಗಿ ಆ.1 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು. ಅದರಂತೆ ಇಂದು 285 ಪಾಸಿಟಿವ್ ಪ್ರಕರಣ ಬೆಳಿಕಿಗೆ ಬಂದಿದು, ಸೊಂಕಿತರ ಸಂಖ್ಯೆ ಒಟ್ಟು 6222ಕ್ಕೆ ಎರಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss