Wednesday, August 10, 2022

Latest Posts

ಮಂಗಳೂರಿನಲ್ಲಿ ನಿಲ್ಲಿಸಿದ ಕಾರಿನಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಪ್ರಕರಣ: ಉಡುಪಿಯಲ್ಲಿ ಆರೋಪಿ ಬಂಧನ

ಉಡುಪಿ: ಮಂಗಳೂರಿನಲ್ಲಿ ನಿಲ್ಲಿಸಿದ ಕಾರಿನಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಪ್ರಕರಣದ ಆರೋಪಿಯನ್ನು ಉಡುಪಿ ಡಿಸಿಐಬಿ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕು ತೋಡಾರ್ ಗ್ರಾಮದ ಬಾಡೊಟ್ಟು ನಿವಾಸಿ ಗುರುಪ್ರಸಾದ್ (32) ಬಂಧಿತ ಆರೋಪಿ.
ಖಚಿತ ಮಾಹಿತಿಯಂತೆ ಉಡುಪಿ ಡಿಸಿಐಬಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜಪ್ಪ ಡಿ.ಆರ್. ಅವರು ತಮ್ಮ ಸಿಬ್ಬಂದಿಯವರೊಂದಿಗೆ ಉಡುಪಿ ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣದ ಬಳಿ ನಿಂತಿದ್ದ ಆರೋಪಿತನನ್ನು ವಶಕ್ಕೆ ಪಡೆದು ವಿಚಾರಿಸಿದ್ದರು. ಈ ವೇಳೆ ಆತನಲ್ಲಿದ್ದ ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕ್ರೇಟಾ ಕಾರಿನಿಂದ ಕಳವು ಮಾಡಿದ್ದ ನಗದು 2,03,700 ರೂ. ಹಾಗೂ ಕಳವು ಮಾಡಿದ್ದ ಹಣದಲ್ಲಿ 8,000 ರೂ.ಗೆ ಖರೀದಿಸಿದ್ದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಬಳಿಕ ಉಡುಪಿ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಕಳವು ಮಾಡಿದ್ದ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯು 2015ರಲ್ಲಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿವೇಳೆ ಬೀಗ ಹಾಕಿದ್ದ ಮನೆಯ ಹೆಂಚು ತೆಗೆದು ಒಳಪ್ರವೇಶಿಸಿ ಕಳ್ಳತನ ಮಾಡಿದ್ದ. ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ.
ಈ ಕಾರ್ಯಚರಣೆಯಲ್ಲಿ ಡಿ.ಸಿ.ಐ.ಬಿ ಘಟಕದ ಎಎಸ್‌ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ, ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಅವರು ಸಹಕರಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss