Saturday, June 25, 2022

Latest Posts

ಮಂಗಳೂರಿನಿಂದ ಬಂತು ಗುಡ್ ನ್ಯೂಸ್: ಅಪಘಾತ, ಸಾವು ಸಂಖ್ಯೆ ಇಳಿಕೆ!

ಹೊಸ ದಿಗಂತ ವರದಿ, ಮಂಗಳೂರು:

ಮಂಗಳೂರಿನಲ್ಲಿ ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಟ್ರಾಫಿಕ್ ಜಾಮ್ ಸಮಸ್ಯೆ, ಪಾರ್ಕಿಂಗ್ ಸಮಸ್ಯೆಯೂ ಅಧಿಕವಾಗಿದೆ. ಇಷ್ಟೆಲ್ಲಾ ಇದ್ದರೂ ಸಮಾಧಾನಕರ ಸುದ್ದಿಯೊಂದಿದೆ.
ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮಂಗಳೂರಿನಲ್ಲಿ 2020ರಲ್ಲಿ ಅಪಘಾತದಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸಂಬಂಧಿಸಿ 2020ರಲ್ಲಿ 114 ಅಪಘಾತ ಪ್ರಕರಣಗಳು ಸಂಭವಿಸಿದ್ದು ಈ ಪೈಕಿ 116 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದಿನ ವರ್ಷ ಅಂದರೆ 2019ರಲ್ಲಿ 146 ಅಪಘಾತ ಪ್ರಕರಣಗಳು ಸಂಭವಿಸಿದ್ದು 154 ಮಂದಿ ಸಾವನ್ನಪ್ಪಿದ್ದಾರೆ.
2018ರಲ್ಲಿ 165 ಭೀಕರ ಅಪಘಾತ ಪ್ರಕರಣಗಳು ಸಂಭವಿಸಿವೆ. ಈ ಘಟನೆಯಲ್ಲಿ 120 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss