Tuesday, September 22, 2020
Tuesday, September 22, 2020

Latest Posts

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಮಂಗಳೂರಿನ ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ: 4ಲಕ್ಷಕ್ಕೂ ಅಧಿಕ ತೆರಿಗೆದಾರರಿಗೆ ತೊಂದರೆ

sharing is caring...!

ಮಣಿಪಾಲ: ಮಂಗಳೂರಿನ ಆದಾಯ ತೆರಿಗೆ ಕಚೇರಿಯನ್ನು ಗೋವಾ ರಾಜ್ಯಕ್ಕೆ ಸ್ಥಳಾಂತರಿಸುವುದರಿಂದ ಅವಿಭಜಿತ ದ.ಕ. ಜಿಲ್ಲೆಯ ಸುಮಾರು 4ಲಕ್ಷಕ್ಕೂ ಅಧಿಕ ತೆರಿಗೆದಾರರಿಗೆ ತೊಂದರೆಯಾಗಲಿದೆ. ಆದ್ದರಿಂದ ಕೇಂದ್ರದ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿ, ಉಡುಪಿ ಜಿ.ಪಂ. ಸಾಮಾನ್ಯಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಮಂಗಳವಾರ ರಜತಾದ್ರಿಯ ಉಡುಪಿ ಜಿ.ಪಂ. ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಈ ಕುರಿತು ಪ್ರಸ್ತಾವಿಸಿ, ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿದರು.
ಕೋವಿಡ್ ಪರೀಕ್ಷೆ, ಚಿಕಿತ್ಸೆ, ಬಿಲ್ ಕುರಿತು ಜನ ಸಾಮಾನ್ಯರಲ್ಲಿ ಹಲವು ಸಂಶಯ, ಗೊಂದಲಗಳಿವೆ. ಇವುಗಳನ್ನು ನಿವಾರಿಸುವಂತೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ ಮತ್ತು ಇತರ ಸದಸ್ಯರು ಪ್ರಶ್ನಿಸಿದರು. ಇದಕ್ಕುತ್ತರಿಸಿದ ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡ, ಕೋವಿಡ್ 19 ಪೀಡಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ, ಎಪಿಎಲ್ ಮತ್ತು ಬಿಪಿಎಲ್ ಬೇಧವಿಲ್ಲದೇ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ರೋಗಿಗಳು ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬಾರದು. ಕೋವಿಡ್ ಅನ್ನು ಬೇಗ ಗುರುತಿಸಿದರೆ ಅದು ಇತರರಿಗೆ ಹರಡುವುದನ್ನು ತಡೆಯಲು ಸಾಧ್ಯವಿದೆ. ಅದಕ್ಕಾಗಿ ಆಂಟಿಜಿನ್ ಟೆಸ್ಟ್ ಮಾಡಲಾಗುತ್ತಿದ್ದು, ಇದರಿಂದ 1ತಾಸಿನಲ್ಲಿ ಲಿತಾಂಶ ದೊರೆಯಲಿದೆ, ಈ ಲಿತಾಂಶದಲ್ಲಿ ನೆಗೆಟಿವ್ ಬಂದಲ್ಲಿ, ರೋಗ ಲಕ್ಷಣಗಳಿರುವ ವ್ಯಕ್ತಿಗಳಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಲಾಗುತ್ತದೆ ಎಂದರು.
ಕೋವಿಡ್ ಪರೀಕ್ಷೆ, ಚಿಕಿತ್ಸೆ ವಿಧಾನಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದ್ದು, ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಹಾಗೂ ಜಿ.ಪಂ.ನಿಂದ ಎಲ್ಲ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಅರಿವು ಮೂಡಿಸಬೇಕು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕೋವಿಡ್ ವಿರುದ್ಧ ಅವಿರತ ಹೋರಾಡುತ್ತಿದೆ. ಖಾಸಗಿ ಆಸ್ಪತೆಗಳು ಸಹ ತಮ್ಮಲ್ಲಿ ದಾಖಲಾಗುವ ರೋಗಿಗಳಿಗೆ ಈ ಬಗ್ಗೆ ವಿವರವಾದ ಮಾಹಿತಿ ನೀಡಬೇಕು ಎಂದು ಪ್ರತಾಪ್ ಹೆಗ್ಡೆ ಮಾರಾಳಿ ಹೇಳಿದರು.
ಕೋವಿಡ್ ಪರೀಕ್ಷೆ, ಚಿಕಿತ್ಸೆ ವಿಧಾನಗಳ ಕುರಿತ ವಿವರಗಳ ಕರಪತ್ರಗಳನ್ನು ಮುದ್ರಿಸಿ ಗ್ರಾ.ಪಂ.ಗಳ ಮೂಲಕ ಪ್ರತೀ ಮನೆ ಮನೆಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಇಒ ಪ್ರೀತಿ ಗೆಹ್ಲೋತ್ ತಿಳಿಸಿದರು.
ಇತ್ತೀಚೆಗೆ ಸುರಿದ ಮಳೆ ಗಾಳಿಯಿಂದ ರಸ್ತೆ ಮೇಲೆ ಬಿದ್ದು, ಬೈಕ್ ಸವಾರ ಯುವಕನೊಬ್ಬ ಮೃತಪಟ್ಟ ಬಗ್ಗೆ ಪ್ರಸ್ತಾಪಿಸಿದ ಸದಸ್ಯೆ ಜ್ಯೋತಿ ಹರೀಶ್, ಇಂತಹ ಅಪಾಯಕಾರಿ ಮರಗಳನ್ನು ಮಳೆಗಾಲದ ಮುಂಚೆಯೆ ಗುರುತಿಸಿ ಕಟಾವು ಮಾಡಬೇಕು ಎಂದರು. ಅರಣ್ಯ ವ್ಯಾಪ್ತಿಯಲ್ಲಿ ಈಗಾಗಲೇ ರಸ್ತೆ ಇದ್ದು ಅದನ್ನು ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆಯಿಂದ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕುರಿತು ಹಲವು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಅಂತಹ ರಸ್ತೆ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ನಡೆಸುವುದಾಗಿ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ತಿಳಿಸಿದರು.
ಪಡುಬಿದ್ರೆಯಲ್ಲಿ ರಸ್ತೆ ಮತ್ತು ಸೇತುವೆ ಕಾಮಗಾರಿ ವಿಳಂಬದ ಕುರಿತು ಸದಸ್ಯ ಶಶಿಕಾಂತ ಪಡುಬಿದ್ರೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ಗೈರಾಗಿದ್ದು, ಕ್ರಮ ಕೈಗೊಳ್ಳುವಂತೆ ಸದಸ್ಯೆ ಶಿಲ್ಪಾ ಸುವರ್ಣ ಹೇಳಿದರು.
ಜಿಲ್ಲೆಯಲ್ಲಿ ಡಯಾಲಿಸಿಸ್ ಹೆಚ್ಚಿನ ಬೇಡಿಕೆ ಇದ್ದು, ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಯಂತ್ರಗಳನ್ನು ಅಳವಡಿಸುವಂತೆ ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಹೇಳಿದರು. ಜಿಲ್ಲಾಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆಯಿದ್ದು, ಬೈಂದೂರು ಮತ್ತು ಬ್ರಹ್ಮಾವರ ಆಸ್ಪತ್ರೆಯಲ್ಲಿ ಹೊಸ ಯಂತ್ರ ಅಳವಡಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಹೆಬ್ರಿ, ಕಾಪು ಆಸ್ಪತ್ರೆಯಲ್ಲೂ ಡಯಾಲಿಸಿಸ್ ಯಂತ್ರ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

Latest Posts

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...

Don't Miss

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...
error: Content is protected !!