Thursday, August 11, 2022

Latest Posts

ಮಂಗಳೂರಿನ ಐಟಿ ಕಚೇರಿ ವಿಲೀನವಿಲ್ಲ; ಯಥಾಸ್ಥಿತಿ ಕಾಪಾಡಲು ಕೇಂದ್ರ ಹಣಕಾಸು ಸಚಿವರ ಒಪ್ಪಿಗೆ: ನಳಿನ್

ಮಂಗಳೂರು: ಕೇಂದ್ರೀಯ ನೇರ ತೆರಿಗೆ ಮಂಡಳಿಯ ನಿರ್ಧಾರದಂತೆ ಕಳೆದ ಎರಡು ದಶಕಗಳಿಗಿಂತ ಹೆಚ್ಚು ಕಾಲ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆದಾಯ ತೆರಿಗೆ ಪ್ರಧಾನ ಆಯುಕ್ತರ (ಆಡಳಿತ) ಕಚೇರಿಯನ್ನು ಗೋವಾದ ಪಣಜಿಯ ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿ ಜತೆ ವಿಲೀನಗೊಳಿಸುವ ಪ್ರಸ್ತಾಪವನ್ನು ಕೈಬಿಡಲಾಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಳಿನ್, ‘ಐಟಿ ಕಚೇರಿ ವಿಲೀನ ಪ್ರಸ್ತಾಪ ಕೈಬಿಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಾನು ವೈಯಕ್ತಿಕವಾಗಿ ಮಾತನಾಡಿದ್ದು, ಕರಾವಳಿ ಕರ್ನಾಟಕದ ತೆರಿಗೆದಾರರ ಹಿತಾಸಕ್ತಿಗೆ ಪೂರಕವಾಗಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಾಯ ತೆರಿಗೆ ಪ್ರದಾನ ಆಯುಕ್ತರ ಕಚೇರಿಯನ್ನು ಮಂಗಳೂರಿನಲ್ಲಿಯೇ ಮುಂದುವರೆಸಲು ಕೇಂದ್ರ ಹಣಕಾಸು ಸಚಿವರು ಒಪ್ಪಿಗೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.
ನನ್ನ ವೈಯಕ್ತಿಕ ಮನವಿಯನ್ನು ಪುರಸ್ಕರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರಾವಳಿಯ ಸಮಸ್ತ ತೆರಿಗೆದಾರರ, ಲೆಕ್ಕಪರಿಶೋಧಕರ ಪರವಾಗಿ ಧನ್ಯವಾದಗಳು. ಇದಕ್ಕೆ ಸಹಕರಿಸಿದ ಕೇಂದ್ರದ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ್ ಜೋಷಿ ಅವರಿಗೂ ಕೃತಜ್ಞತೆಗಳು ಎಂದು ನಳಿನ್ ಕುಮಾರ್ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss