ಹೊಸದಿಗಂತ ವರದಿ ಮಂಗಳೂರು:
ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಗುರುವಾರ ಪ್ರಮುಖ ನಾಲ್ಕು ಬೀಚ್ಗಳಲ್ಲಿ ‘ಸುರಕ್ಷಾ’ ಪೊಲೀಸ್ ಕಾರ್ಯಾಚರಣೆ ನಡೆಸಲಾಗಿದೆ.
ಕಾರ್ಯಾಚರಣೆಯಲ್ಲಿ 70 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಗಾಂಜಾ ಮಾರಾಟ ಕುರಿತಾಗಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಬ್ಬನ ಮೇಲೆ ಕೇಸು ದಾಖಲಿಸಲಾಗಿದೆ.
17 ಮೋಟಾರು ಬೈಕ್, 7 ಕಾರುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. 12 ಮೋಟಾರು ಬೈಕ್ಗಳ ಮೇಲೆ ಮತ್ತು ಒಂದು ಕಾರಿನ ಮೇಲೆ ಕೇಸು ಇರುವುದು ಈ ಸಂದರ್ಭದಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಕೆಲವು ದ್ವಿಚಕ್ರ ವಾಹನಗಳ ಮೇಲೆ ಹತ್ತಕ್ಕೂ ಅಧಿಕ ಕೇಸುಗಳಿವೆ ಎಂದು ತಿಳಿದು ಬಂದಿದೆ. ರಾತ್ರಿ ಎಂಟು, ಎಂಟೂವರೆಯ ಬಳಿಕ ಕಡಲ ಕಿನಾರೆಯಲ್ಲಿದ್ದು ಅಮಲು ಸೇವಿಸುವವರನ್ನು, ಅನಗತ್ಯವಾಗಿ ತಿರುಗಾಡುವವರನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ನಾಗರಿಕರ ಸುರಕ್ಷತೆಯ ಭಾಗವಾಗಿ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.