ಹೊಸ ದಿಗಂತ ವರದಿ,ಮಂಗಳೂರು:
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಡಿ ಬರುವ ಕಾಲೇಜುಗಳು ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಡಿ.1ರಿಂದ ಆರಂಭಗೊಳ್ಳುವುದು ಬಹುತೇಕ ಖಚಿತವಾಗಿದೆ.
ಗುರುವಾರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರ ಅಧ್ಯಕ್ಷತೆಯಲ್ಲಿ ಸಿಂಡಿಕೇಟ್ ಸಭೆ ನಡೆದಿದ್ದು, ತರಗತಿ ಆರಂಭಿಸುವ ನಿರ್ಣಯ ಕೈಗೊಳ್ಳಲಾಗಿದೆ.
ನ.17ರಿಂದ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಕೋವಿಡ್ ನಿಯಮ ಪಾಲಿಸಿಕೊಂಡು ತಕ್ಷಣಕ್ಕೆ ತರಗತಿ ಆರಂಭಿಸಲು ಎಲ್ಲ ಕಾಲೇಜುಗಳು ಸಿದ್ಧವಾಗಿರದ ಕಾರಣ, ಎಲ್ಲಾ ಸಿದ್ಧತೆ ಪೂರ್ಣಗೊಳಿಸಿ ಡಿ.೧ರಿಂದ ತರಗತಿ ಆರಂಭಿಸಲು ವಿವಿ ನಿರ್ಧರಿಸಿದೆ.
ಕಡ್ಡಾಯ ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿಗಳು ಆರಂಭವಾಗಲಿವೆ.