ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ: ಸಚಿವ ಸುಧಾಕರ್

0
108

ಉಡುಪಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ ಅನ್ವಯ ಮಾಡಲಾಗುತ್ತದೆ. ಈ ಮಾರ್ಗಸೂಚಿ ಈಗಾಗಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಾರಿಯಲ್ಲಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಅವರು ಬುಧವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ವಿಮನ ನಿಲ್ದಾಣಕ್ಕೂಹೊರ ರಾಜ್ಯ ಮತ್ತು ಹೊರ ದೇಶಗಳಿಂದ ಪ್ರಯಾಣಿಕರು ಆಗಮಿಸುವುದರಿಂದ ಕೆಲ ಬದಲಾವಣೆ ಮಾಡಿ ತಕ್ಷಣ ಮಾರ್ಗಸೂಚಿ ಹೊರಡಿಸುತ್ತೇವೆ ಎಂದರು. ವಿಮಾನ ಮೂಲಕ ಬರುವವರು ಮೊದಲೇ ನೋಂದಾಯಿಸಬೇಕು. ಅಲ್ಲದೇ ಐಸಿಎಂಆರ್ ಮಾರ್ಗಸೂಚಿ ಪಾಲಿಸಬೇಕು. ಅದು ಅನುಮತಿಸಿದ ಲ್ಯಾಬ್ ನಿಂದ ವಿಮಾನ ಪ್ರಯಾಣಕ್ಕೂ 48 ತಾಸು ಮೊದಲು ಕೋವಿಡ್ -19 ಪರೀಕ್ಷೆಯಲ್ಲಿ ಸೋಂಕು ಇಲ್ಲದಿರುವ ಬಗ್ಗೆ ವರದಿ ತರಬೇಕು. ಈ ನಿಯಮವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ಜಾರಿಗೆ ತರುತ್ತೇವೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದರು.

LEAVE A REPLY

Please enter your comment!
Please enter your name here