ಹೊಸದಿಗಂತ ವರದಿ ಮಂಗಳೂರು:
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸಾಧಕರ ಹೆಸರನ್ನಿಡಬೇಕು ಎಂದು ಒತ್ತಾಯಿಸಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಮಾನ ನಿಲ್ದಾಣಕ್ಕೆ ಸಮೀಪದ ಕೆಂಜಾರಿನಲ್ಲಿ ಪ್ರತಿಭಟನೆ ನಡೆಯಿತು.
ಮಾಜಿ ಶಾಸಕ ಅಭಯಚಂದ್ರ ಜೈನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಶಾಸಕ ವಿನಯ ಕುಮಾರ್ ಸೊರಕೆ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ಯಾಲೆಟ್ ಪಿಂಟೋ ಮತ್ತಿತರರು ಪಾಲ್ಗೊಂಡಿದ್ದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರಿನ ಬದಲು ತುಳುನಾಡಿನ ಸಾಧಕರ ಹೆಸರನ್ನು ಇಡಬೇಕು. ಅಲ್ಲದೆ ವಿಮಾನ ನಿಲ್ದಾಣದಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿಕರಣಗೊಳಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.