ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 69 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿದ್ದ 30, 25, ಮತ್ತು 55 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮುಂಬೈ ಮತ್ತು ದುಬೈ ನಿಂದ ಬಂದು ಕ್ವಾರಂಟೈನ್ ನಲ್ಲಿ ಇರುವವರಲ್ಲಿ ಕೊರೋನಾ ಸೋಂಕು ಇರುವುದು ದೃಢವಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಇಂದು ಒಟ್ಟು 16 ಪಾಸಿಟಿವ್ ಪತ್ತೆಯಾಗಿದೆ.