Sunday, July 3, 2022

Latest Posts

ಮಂಗಳೂರು| ಗ್ರಾ.ಪಂ. ಚುನಾವಣೆ ನೂರಕ್ಕೆ ನೂರು ಸ್ಥಾನ ಗೆಲ್ಲುವಲ್ಲಿ ಶ್ರಮ: ಡಾ. ಅಶ್ವತ್ಥ ನಾರಾಯಣ್

ಹೊಸ ದಿಗಂತ ವರದಿ ಮಂಗಳೂರು:

ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಸ್ಥಾನವನ್ನು ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ ಹೇಳಿದರು.

ಮಂಗಳೂರಿನಲ್ಲಿರುವ ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರ ಜಾರಿಗೆ ತಂದ ಜನಪರ ಯೋಜನೆಗಳನ್ನು ತಿಳಿಸುವ ಮೂಲಕ ಪಕ್ಷದ ಸಾಧನೆಯನ್ನು ಜನತೆಯ ಮುಂದಿಡಲಾಗುವುದು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಯೋಜನೆಗಳ ಬಗ್ಗೆ ಮನೆ ಮನೆಯಲ್ಲೂ ಮಾತಾಡುವಂತಾಗಬೇಕು. ಈ ನಿಟ್ಟಿನಲ್ಲಿ ಜಾಗೃತಿಯ ಅನಿವಾರ್ಯತೆಯಿದೆ. ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದರು.

ಕಾರ್ಯಕರ್ತರನ್ನು ಸಂಘಟಿಸುವ ಮೂಲಕ ಪಂಚಸೂತ್ರಗಳೊಂದಿಗೆ ಗ್ರಾಮ ಪಂಚಾಯತ್ ಚುನಾವಣೆ ಗೆಲ್ಲುವ ಸೂತ್ರ ರೂಪಿಸಿದ್ದೇವೆ. ಗ್ರಾಮ ಸ್ವರಾಜ್ಯ ಸಮಾವೇಶದ ರಾಜ್ಯದಲ್ಲಿ ಜನತೆಯನ್ನು ಜಾಗೃತಗೊಳಿಸುವ ಕಾರ್ಯ ಪಕ್ಷದ ವತಿಯಿಂದ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಹೇಳಿದರು.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸಚಿವರಾಗಬೇಕೆಂಬ ಅಪೇಕ್ಷೆ ಪ್ರತಿಯೊಬ್ಬ ಶಾಸಕನಿಗೂ ಇರುತ್ತದೆ. ಆದರೆ ಮುಖ್ಯಮಂತ್ರಿಗಳು ಮತ್ತು ಹೈಕಮಾಂಡ್ ಯಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದನ್ನು ನಿರ್ಧರಿಸುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಎಂ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಸಂಸದ ಎಸ್.ಮುನಿಸ್ವಾಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ಮೇಯರ್ ದಿವಾಕರ ಪಾಂಡೇಶ್ವರ, ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss