ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಾರಕ ಸೋಂಕಿನ ದಾಳಿಗೆ ಮತ್ತೆರಡು ಬಲಿಯಾಗಿದೆ.
ಸುರತ್ಕಲ್ ಸಮೀಪದ ಇಡ್ಯಾ ನಿವಾಸಿ 31 ವರ್ಷದ ಯುವಕ ಹಾಗೂ ಬಂಟ್ವಾಳ ತಾಲೂಕಿನ 57 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ನಗರದ ಸುರತ್ಕಲ್ ಸಮೀಪದ 57 ವರ್ಷದ ಇಡ್ಯಾ ನಿವಾಸಿಯಾದ 31 ವರ್ಷದ ಯುವಕನಿಗೆ ಜೂ.26 ರಂದು ಆರೋಗ್ಯ ಸಮಸ್ಯೆ ಕಂಡುಬಂದಿದೆ. ಅವರ ಬಿಪಿ ಲೋ ಆಗಿದ್ದು ತಕ್ಷಣ ಲೋ ಬಿಪಿ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಆದರೆ ಇಷ್ಟರಲ್ಲೇ ಅವರು ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಅದೇ ರೀತಿ ಕೋವಿಡ್ ಸೋಂಕಿನಿಂದ ಆಸ್ಪತ್ರೆ ಸೇರಿದ್ದ ಬಂಟ್ವಾಳದ 57 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಎರಡು ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಇದರ ನಡುವೆ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.