Wednesday, June 29, 2022

Latest Posts

ಮಂಗಳೂರು| ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ರಾಜ್ಯದ ಕಾರ್ಮಿಕರಿಗೆ ರೈಲು ವ್ಯವಸ್ಥೆ ಪ್ರಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಉತ್ತರ ಭಾರತ ಸೇರಿದಂತೆ ಹೊರರಾಜ್ಯಗಳಿಗೆ ಸಂಚರಿಸುವ ಪ್ರಯಾಣಿಕರಿಗೆ ರೈಲು ಪ್ರಯಾಣ ಶನಿವಾರ ರಾತ್ರಿಯಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.
ವಲಸೆ ಕಾರ್ಮಿಕರು ನೇರವಾಗಿ ರೈಲು ನಿಲ್ದಾಣಕ್ಕೆ ಬರುವಂತಿಲ್ಲ. ಈಗಾಗಲೇ ಸೇವಾ ಸಿಂಧು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿರುವ ಕಾರ್ಮಿಕರಿಗೆ ಅಗತ್ಯ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡು ಎಲ್ಲರಿಗೂ ಅವರವರ ಮನೆ ವಠಾರದಿಂದ ಕರೆದುಕೊಂಡು ರೈಲು ನಿಲ್ದಾಣಕ್ಕೆ ಬರಲು ವಾಹನದ ವ್ಯವಸ್ಥೆ ಮಾಡಲಾಗಿದೆ. ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಸ್ವತಃ ರೈಲು ನಿಲ್ದಾಣ ಕಡೆಗೆ ಬರುವಂತಿಲ್ಲ. ಅವರಿರುವ ಸ್ಥಳದಿಂದ ವಾಹನದಲ್ಲಿ ಕರೆದುಕೊಂಡು ಬರಲಾಗುವುದು. ಸೇವಾ ಸಿಂಧೂ ನಲ್ಲಿ ನೋಂದಣಿ ಮಾಡಿರುವ ಕಾರ್ಮಿಕರಿಗೆ ‘ಮೊದಲು ನೋಂದಣಿ ಮಾಡಿದವರಿಗೆ ಮೊದಲ ಆದ್ಯತೆ’ ಎಂಬಂತೆ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಅವರು ಪ್ರಯಾಣ ಸಿದ್ಧತೆಯನ್ನು ಮಾಡುವಂತೆ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss