ಹೊಸ ದಿಗಂತ ವರದಿ, ಮಂಗಳೂರು:
ಮಂಗಳೂರು ನಗರದಲ್ಲಿ ಭಯೋತ್ಪಾದಕರ ಪರ ಗೋಡೆ ಬರಹ ಬರೆದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೋಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ( 22) ಮತ್ತು ಮಾಝ ಮುನೀರ್ ಅಹಮ್ಮದ್ (22) ಎಂದು ಗುರುತಿಸಲಾಗಿದೆ.
ಇಬ್ಬರು ಆರೋಪಿಗಳು ಒಂದೇ ಊರಿನವರಾಗಿದ್ದಾರೆ. ಶಾರೀಕ್ ತೀರ್ಥಹಳ್ಳಿಯಲ್ಲಿ ತಂದೆಯ ಬಟ್ಟೆ ಅಂಗಡಿಯಲ್ಲಿ ಸೇಲ್ಸ್ಮನ್ ಆಗಿ ಕೆಲಸ ಮಾಡುತ್ತಿದ್ದ. ಮುನೀರ್ ಮಂಗಳೂರಿನಲ್ಲಿ ಇಂಜಿನಿಯರಿಂಗ್ ಮೂರನೆಯ ಸೆಮಿಸ್ಟರ್ ವಿದ್ಯಾರ್ಥಿ. ಕಳೆದ ಒಂದೂವರೆ ತಿಂಗಳಿನಿಂದ ಝೊಮಾಟೊ ಆಹಾರ ವಿತರಣಾ ಸಂಸ್ಥೆಯ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಪ್ರಚಾರಕ್ಕಾಗಿ ಆಕ್ಷೇಪಾರ್ಹ ಗೀಚು ಬರಹ ಬರೆದಿರುವುದು ಗೊತ್ತಾಗಿದೆ. ಬಂಧಿತ ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ತಿಳಿಸಿದರು.