ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಬೋಳೂರಿನ 58 ರ ಹರೆಯದ ಮಹಿಳೆಯಲ್ಲಿ ಕೊರೋನಾ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ.
ಈ ಮಹಿಳೆ ಇತ್ತೀಚೆಗೆ ಕೊರೋನಾ ಸೋಂಕಿನಿಂದ ಹಾಟ್ ಸ್ಪಾಟ್ ಆಗಿ ಗುರುತಿಸಿಕೊಂಡ ಪಡೀಲ್ ನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದೇ ವೇಳೆ ಅವರಿಗೆ ಸೋಂಕು ತಗುಲಿದೆ ಎನ್ನಲಾಗಿದೆ. ಫಸ್ಟ್ ನ್ಯೂರೊದಿಂದ ಚಿಕಿತ್ಸೆಯ ಬಳಿಕ ಮನೆಗೆ ಬಂದಿದ್ದ ಮಹಿಳೆಗೆ ಮಂಗಳವಾರ ಜ್ವರ ಲಕ್ಷಣ ಕಂಡು ಬಂದಿದ್ದು ಅವರನ್ನು ತಕ್ಷಣ ಕೋವಿಡ್ ಆಸ್ಪತ್ರೆಯಾದ ವೆನ್ಲಾಕ್ ಗೆ ದಾಖಲಿಸಲಾಗಿತ್ತು. ಗುರುವಾರ ವರದಿ ಬಂದಿದ್ದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಪ್ರಕರಣದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 22 ಪ್ರಕರಣಗಳು ಪತ್ತೆಯಾದಂತಾಗಿದೆ. ಮಂಗಳೂರು ನಗರದಲ್ಲಿ ಇದು ಎರಡನೇ ಪ್ರಕರಣ. ಏ.27 ರಂದು ಶಕ್ತಿನಗರದ ಮಹಿಳೆಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು.