ಮಂಗಳೂರು: ಮಂಗಳೂರು ನಗರ ಪೊಲೀಸರು ಆ.21ರಂದು ಖಚಿತ ಮಾಹಿತಿ ಆಧರಿಸಿ ಗಾಂಜಾ ಸಾಗಾಟ ಜಾಲವೊಂದನ್ನು ಬೇಧಿಸಿದ್ದಾರೆ.
ರಾ.ಹೆ.66ರ ಪಂಪುವೆಲ್ ಬಳಿಯ ತಾರೆತೋಟ ಎಂಬಲ್ಲಿ ಬೊಲೆರೊ ಪಿಕಪ್ ವಾಹನದಲ್ಲಿ ಕಾಸರಗೋಡಿನತ್ತ ಸಾಗಿಸುತ್ತಿದ್ದ 132 ಕೆ.ಜಿ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಹಿಂಬಾಲಕ ಸ್ವಿಫ್ಟ್ ಕಾರು ಕೂಡಾ ಪೊಲೀಸರ ವಶವಾಗಿದೆ.
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಧಿತರನ್ನು ವರ್ಕಾಡಿ ಪಾವೂರಿನ ಕಲಂದರ್ ಮಹಮ್ಮದ್ ಮತ್ತು ಕುಂಜತ್ತೂರಿನ ಮೊಹಿದಿನ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಗಳಿಂದ ಎರಡು ಮೊಬೈಲ್ ಫೋನ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ವಶ ಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂ.43 ಲಕ್ಷ ಎಂದು ತಿಳಿದು ಬಂದಿದೆ. ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಡಿಸಿಪಿಗಳಾದ ಅರುಣಾಂಶು ಗಿರಿ, ವಿನಯ್ ಗಾವಂಕರ್ ನಿರ್ದೇಶನದಲ್ಲಿ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್, ಸಬ್ ಇನ್ ಸ್ಪೆಕ್ಟರ್ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.