ಹೊಸ ದಿಗಂತ ವರದಿ, ಮಂಗಳೂರು:
ಲವ್ ಜಿಹಾದ್ನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧ ಮಾಡುವಂತೆ ಆಗ್ರಹಿಸಿ ಬಜರಂಗ ದಳ ನ.೧೧ರಂದು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಿದೆ.
ಇತ್ತೀಚಿನ ದಿನಗಳಲ್ಲಿ ಸಮಾಜದ ಶಾಂತಿಗೆ ಲವ್ ಜಿಹಾದ್ ಮಾರಕವಾಗುತ್ತಿದೆ. ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ ಎಂದು ಬಜರಂಗ ದಳ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಜರಂಗ ದಳ ಆರಂಭದಿಂದಲೂ ಲವ್ ಜಿಹಾದ್ ವಿರುದ್ಧ ನಿರಂತರ ಹೋರಾಟ ಮಾಡಿಕೊಂಡು ಬಂದ ಪರಿಣಾಮವಾಗಿ ಸರಕಾರವು ದೇಶದಲ್ಲಿ ಲವ್ ಜಿಹಾದ್ ಇರುವುದನ್ನು ಒಪ್ಪಿಕೊಂಡಿದೆ. ಲವ್ ಜಿಹಾದ್ನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಆಗ್ರಹವಾಗಿದೆ ಎಂದು ಅವರು ಹೇಳಿದ್ದಾರೆ.